ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳಾ ಬೋಧಕ ಸಿಬ್ಬಂದಿಯ ಫೋಟೋಗಳನ್ನು ಕದ್ದು ಅಶ್ಲೀಲ ವೆಬ್‍ಸೈಟ್‍ಗಳಲ್ಲಿ ಅಪ್ಲೋಡ್ ಮಾಡಿದ್ದ ಪ್ರರಕರಣದಲ್ಲಿ ಇಬ್ಬರು ಟೆಕ್ಕಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಟೆಕ್ಕಿಗಳನ್ನು ಅಜಯ್ ತನಿಕಾಂಚಲಂ, ವಿಶ್ವಕ್ ಸೇನ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿತ್ತು. ಸರಿ ಸುಮಾರು 30ಕ್ಕೂ ಹೆಚ್ಚು ಯುವತಿಯರ ಫೋಟೋಗಳನ್ನು ಆರೋಪಿಗಳು ಅಶ್ಲೀಲ ವೆಬ್‍ಸೈಟ್‍ಗಳಿಗೆ ಅಪ್ಲೋಡ್ ಮಾಡಿದ್ದರು.
ಕಾಲೇಜು ವಿದ್ಯಾರ್ಥಿನಿಯರು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ಫೋಟೋಗಳನ್ನು ಕದ್ದು ಕೃತ್ಯ ಎಸಲಾಗಿತ್ತು. ನಕಲಿ ಖಾತೆ ಸೃಷ್ಟಿಸಿ ಫೇಸ್‍ಬುಕ್ ಹಾಗೂ ಇನ್ಸ್‍ಸ್ಟಾದಲ್ಲಿ ವಿದ್ಯಾರ್ಥಿನಿಯರಿಗೆ ರಿಕ್ವೆಸ್ಟ್ ಕಳಿಸಿ ಬಳಿಕ ಫೋಟೋಗನ್ನು ಆರೋಪಿಗಳು ಶೇರ್ ಮಾಡಿಕೊಂಡಿದ್ದರು. ಅಶ್ಲೀಲ ವೆಬ್‍ಸೈಟ್‍ಗಳಲ್ಲಿ ಫೋಟೋಗಳು ಪತ್ತೆಯಾಗುತ್ತಿದಂತೆ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ್ದರು.
ವಿದ್ಯಾರ್ಥಿನಿಯರ ಫೋಟೋವನ್ನು ಕದ್ದು ಫೋಟೋಗೆ ಅಶ್ಲೀಲ ದೇಹದ ಫೋಟೋಗಳನ್ನು ಎಡಿಟ್ ಮಾಡಿ ಅಪ್ಲೋಡ್ ಮಾಡಲಾಗಿತ್ತು. ಈ ಹಿಂದೆ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಹೆಚ್ಚು ಫೋಟೋ ಅಪ್ಲೋಡ್ ಮಾಡದಂತೆ ಮನವಿ ಮಾಡಿದ್ದರು.
Follow us on Social media