- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೊಷಣೆ ಮಾಡಲಾಗಿದೆ. ಸುರಕ್ಷತೆಯ ದೃಷ್ಠಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಆದೇಶ ಹೊರಡಿಸಿದ್ದಾರೆ.
- ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಲ್ಲಿ ಆಗಸ್ಟ್ 9ರ ತನಕ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಶುಕ್ರವಾರ ಕೂಡ ರಜೆ ಘೋಷಿಸಲಾಗಿದೆ.
- ಅಂಗನವಾಡಿಯಿಂದ ಹಿಡಿದು ಸ್ನಾತಕೋತ್ತರ ಪದವಿ ತರಗತಿಗಳ ತನಕ ರಜೆ ಘೋಷಣೆ ಮಾಡಲಾಗಿದೆ.