ನವದೆಹಲಿ: ವಿದೇಶಿ ವಸ್ತುಗಳ ಆಮದು ನಿಲ್ಲಿಸಿ, ಸ್ವಾವಲಂಬಿಯಾಗುವ ಮೂಲಕ ಕೊರೋನಾ ವೈರಸ್ ಬಿಕ್ಕಟನ್ನು ಭಾರತ ಅವಕಾಶವನ್ನಾಗಿ ಪರಿವರ್ತಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ.
ದೇಶದ 41 ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆಯನ್ನು ಉದ್ಘಾಟಿಸಿದ ಬಳಿಕ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿರುವ ಅವರು, ಕೊರೋನಾ ಬಿಕ್ಕಟ್ಟನ್ನೇ ಭಾರತ ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳಲಿದೆ. ಕೊರೋನಾ ಬಿಕ್ಕಟ್ಟು ಸ್ವಾವಲಂಬಿಯಾಗಿರಬೇಕೆಂಬ ಪಾಠವನ್ನು ಕಲಿಸಿದೆ. ಆಮದು ವಸ್ತುಗಳ ಮೇಲೆ ಅವಲಂಬಿತವಾಗಿರುವುದನ್ನು ಭಾರತ ಕಡಿಮೆ ಮಾಡಲಿದೆ ಎಂದು ಹೇಳಿದ್ದಾರೆ.
ಕಲ್ಲಿದ್ದನ್ನು ಗಣಿಯನ್ನು ಕೇವಲ ಆರ್ಥಿಕತೆ ಹೆಚ್ಚಿಸಿಕೊಳ್ಳಷ್ಟೇ ಹರಾಜು ಹಾಕುತ್ತಿಲ್ಲ. ದಶಗಳಿಂದ ಲಾಕ್’ಡೌನ್ ಆಗಿದ್ದ ಕಲ್ಲಿದ್ದಲನ್ನು ಹೊರ ತರುತ್ತಿದ್ದೇವೆ. ಭಾರತವು ವಿಶ್ವದ ನಾಲ್ಕನೇ ಅತಿದೊಡ್ಡ ಕಲ್ಲಿದ್ದಲು ನಿಕ್ಷೇಪಗಳನ್ನು ಹೊಂದಿದೆ. ಮತ್ತು ಎರಡನೇ ಅತಿದೊಡ್ಡ ಉತ್ಪಾದಕ ರಾಷ್ಟ್ರವಾಗಿದ್ದರೂ ಭಾರತವು ಇನ್ನೂ ಕಲ್ಲಿದ್ದಲನ್ನು ರಫ್ತು ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.
Follow us on Social media