ಮುಂಬೈ: ಅಹಮದಾಬಾದ್‌ನ ಮೊಟೆರಾದ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯ 19 ಮಂದಿಯ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ಪ್ರಕಟಿಸಿದೆ.
ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿ ಆಯ್ಕೆ ಮಾಡಿದ ತಂಡದಲ್ಲಿ ಇಶನ್ ಕಿಶನ್, ಸೂರ್ಯಕುಮಾರ್ ಯಾದವ್, ರಾಹುಲ್ ತೆವಾಟಿಯಾ ಅವರುಗಳು ಇದೇ ಮೊದಲ ಬಾರಿಗೆ ಟಿ 20 ಅಂತರಾಷ್ಟ್ರೀಯ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಗಾಯದ ಸಮಸ್ಯೆಯ ನಂತರ ಭುವನೇಶ್ವರ್ ಕುಮಾರ್ ಟಿ 20 ಐ ಪುನರಾಗಮನ ಮಾಡಿದರೆ, ಜಸ್ಪ್ರೀತ್ ಬುಮ್ರಾಮತ್ತು ರವೀಂದ್ರ ಜಡೇಜಾ ಸರಣಿಯಿಂದ ದೂರ ಉಳಿದಿದ್ದಾರೆ.
ಟಿ 20ಗಾಗಿ ಟೀಂ ಇಂಡಿಯಾ ತಂಡ ಹೀಗಿದೆ- ವಿರಾಟ್ ಕೊಹ್ಲಿ(ಕ್ಯಾಪ್ಟನ್), ರೋಹಿತ್ ಶರ್ಮಾ(ಉಪನಾಯಕ), ಕೆ.ಎಲ್.ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್(ವಿ.ಕೀ), ಇಶನ್ ಕಿಶನ್(ವಿ.ಕೀ), ಯಜುವೇಂದ್ರ ಚಹಾಲ್, ವರುಣ್ ಚಕ್ರವರ್ತಿ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ಟಿ.ನಟರಾಜನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ನವದೀಪ್ ಸೈನಿ ಹಾಗೂ ಶಾರ್ದೂಲ್ ಠಾಕೂರ್.
Follow us on Social media