ಮಂಗಳೂರು : ಸೋಮವಾರ ಒಂದೇ ದಿನ ದ.ಕ. ಉಡುಪಿ ಜಿಲ್ಲೆಗಳಲ್ಲಿ 77 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಪೈಕಿ ದ.ಕ. ಜಿಲ್ಲೆಯಲ್ಲಿ ನಾಲ್ವರಲ್ಲಿ ಸೋಂಕು ದೃಢಪಟ್ಟಿದ್ದು, ಉಡುಪಿಯಲ್ಲಿ 73 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಪೈಕಿ ಹೆಚ್ಚಿನವರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದು, ಕ್ವಾರಂಟೈನ್ ನಲ್ಲಿದ್ದರು ಎಂದು ತಿಳಿದುಬಂದಿದೆ. ಇನ್ನು ಕೆಲವು ಪ್ರಕರಣಗಳ ಮೂಲ ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದೆ.
ಇನ್ನು ಉಡುಪಿ ಜಿಲ್ಲೆಯಲ್ಲಿ ಸುಮಾರು 37 ಸೋಂಕಿತರ ಮೂಲ ಪತ್ತೆಯಾಗಿಲ್ಲ. ಆರೋಗ್ಯ ಇಲಾಖೆ ಅವರ ಸೋಂಕಿನ ಮೂಲ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದೆ. ಇನ್ನು 33 ಮಂದಿ ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ ಪಾಸಿಟಿವ್ ಕಂಡುಬಂದಿದೆ. ಮೂವರು ದುಬೈನಿಂದ ಬಂದವರಾಗಿದ್ದಾರೆ.
ದ.ಕ. ಜಿಲ್ಲೆಯಲ್ಲಿ ನಾಲ್ವರಲ್ಲಿ ಪಾಸಿಟಿವ್:
24 ವರ್ಷದ ಹೆಣ್ಣು-ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.
45 ವರ್ಷದ ಹೆಣ್ಣು -ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು(SARI)
27 ವರ್ಷದ ಗಂಡು-ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.
50 ವರ್ಷದ ಗಂಡು-ಗುಜರಾತ್ ರಾಜ್ಯದಿಂದ ಹಿಂದಿರುಗಿದವರಾಗಿದ್ದಾರೆ.