ಉಡುಪಿ : ನಗರದ ಆಸ್ಪತ್ರೆಯೊಂದರಲ್ಲಿ ಎಂಜಿನಿಯಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವ್ಯಕ್ತಿಯೋರ್ವರ ಕಂಪ್ಯೂಟರ್ ಕಳವಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿಯ ಮೂಡನಿಡಂಬೂರು ಗ್ರಾಮದ ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸುಮಾರು 4 ವರ್ಷಗಳಿಂದ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಪ್ರಕಾಶ್ ಎಸ್. (38) ಅವರ ಸುಮಾರು 8 ಸಾವಿರ ರೂ. ಮೌಲ್ಯದ ಕಂಪ್ಯೂಟರ್ ಕಳವಾಗಿರುವ ಬಗ್ಗೆ ದೂರು ದಾಖಲಾಗಿದೆ.
ಪ್ರಕಾಶ್ ಅವರು ಜೂನ್ 11ರ ಮಧ್ಯಾಹ್ನ 2 ಗಂಟೆಗೆ ಮೇಲಾಧಿಕಾರಿಯವರ ಅನುಮತಿ ಪಡೆದು ರಜೆಯಲ್ಲಿ ತೆರಳಿದ್ದು, ಮರುದಿನ ಬೆಳಗ್ಗೆ 8.30ಕ್ಕೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಈ ವೇಳೆ ಅವರು ಕೆಲಸ ಮಾಡುತ್ತಿದ್ದ ಟೇಬಲ್ ಮೇಲಿದ್ದ ಕಂಪ್ಯೂಟರ್, ಸಿಪಿಯು, ಕೀಬೋರ್ಡ್, ಮೌಸ್ ನಾಪತ್ತೆಯಾಗಿತ್ತು. ಹೀಗಾಗಿ 11ರ ಮಧ್ಯಾಹ್ನ 2 ಗಂಟೆಯಿಂದ ಮರುದಿನ ಬೆಳಗ್ಗೆ 8.30ರೊಳಗೆ ಕಂಪ್ಯೂಟರ್ ಕಳವಾಗಿರಬಹುದು ಎಂದು ದೂರಿನಲ್ಲಿ ತಿಳಿಸಲಾಗಿದೆ.
Follow us on Social media