ಉಡುಪಿ : ಹೆಬ್ರಿಯ ಬೊಮ್ಮರಬೆಟ್ಟು ಗ್ರಾಮದ ಸಾಧನಾ ಕಾಂಪೌಂಡ್‌ನಲ್ಲಿ ಸ್ಕೂಟರ್ ಸವಾರರೊಬ್ಬರು ಗುಂಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಶರತ್ ಶೆಟ್ಟಿ (55) ದಿನದ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಮಳೆ ನೀರು ತುಂಬಿದ್ದರಿಂದ ಗುಂಡಿಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media