ಉಡುಪಿ : ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಆದೇಶಿಸಿದ್ದಾರೆ.
- ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ಮುಂದಿನ ಎರಡು ದಿನ ಕಾಲ ವಿಪರೀತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜುಲೈ 1ರಂದುರಜೆ ಘೋಷಿಸಲಾಗಿದೆ.ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಪ್ರಾಥಮಿಕ, ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.