ಉಡುಪಿ : ಜಿಲ್ಲೆಯಲ್ಲಿ ಲಾಕ್ ಡೌನ್ ಮತ್ತಷ್ಟು ಸಡಿಲಿಕೆಗೊಳಿಸಲಾಗಿದೆ. ಮಂಗಳವಾರದಿಂದ ಜಿಲ್ಲೆಯಲ್ಲಿ ಖರೀದಿಗೆ ಹೆಚ್ಚಿನ ಸಮಯ ಸಿಗಲಿದ್ದು, ಬೆಳಗ್ಗೆ 7ರಿಂದ ಸಂಜೆ 7ರ ತನಕ ಅಂಗಡಿಗಳು ಓಪನ್ ಇರಲಿವೆ ಎಂಬುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ನೀಡಿದ್ದಾರೆ.
ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿರುವ ಐದು ಶಾಸಕರೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೋಮವಾರದಂದು ಜನರ ಪ್ರತಿಕ್ರಿಯೆಗಳನ್ನು ಗಮನಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮಂಗಳವಾರದಂದು ವೈನ್ ಶಾಪ್ ಮಾತ್ರ ಕಾರ್ಯಾಚರಣೆ ನಡೆಸಲಿದ್ದು, ಬಾರ್ ಓಪನ್ ಇಡಲು ಅವಕಾಶಗಳಿಲ್ಲ ಎಂಬುವುದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ಈ ಹಿಂದೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಎಲ್ಲಾ ಅಂಗಡಿಗಳ ವ್ಯವಹಾರದ ಸಮಯವನ್ನು ಬೆಳಗ್ಗೆ 7 ರಿಂದ 11 ರವರೆಗಿದ್ದುದನ್ನು 2ಗಂಟೆ ಹೆಚ್ಚಿಸಿ 7 ರಿಂದ ಮದ್ಯಾಹ್ನ 1 ರವರೆಗೆ ವಿಸ್ತರಿಸಲಾಗಿತ್ತು. ಅದೇ ರೀತಿ ಮದ್ಯ ಮಾರಾಟಕ್ಕೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಜನರ ನೈಜ ಸಮಸ್ಯೆಗಳನ್ನು ಆಲಿಸಿರುವ ಜಿಲ್ಲಾಧಿಕಾರಿಗಳಿ ಮಂಗಳವಾರದಿಂದ ಲಾಕ್ ಡೌನ್ ಸಡಿಲಿಕೆ ಅವಧಿಯನ್ನು ವಿಸ್ತರಿಸಿದ್ದಾರೆ. ಮಧ್ಯಾಹ್ನದ ತನಕ ಇದ್ದ ವಿನಾಯಿತಿಯನ್ನು ಸಂಜೆ ಏಳರ ತನಕ ನೀಡುವ ಮೂಲಕ ಜನತೆ ನಿಟ್ಟುಸಿರು ಬಿಡುವಂತಾಗಿದೆ.
Follow us on Social media