ಮಂಗಳೂರು: ಉಡುಪಿ ಜಿಲ್ಲಾಡಳಿತದ ನೇತೃತ್ವದಲ್ಲಿ ಗುರುವಾರ ಮುಂಜಾನೆ ನಡೆದ ಕಾರ್ಯಾಚರಣೆಯಲ್ಲಿ ಮಲ್ಪೆ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ 16 ಅಪ್ರಾಪ್ತರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಪರಿಷತ್ತು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು, ಕಾರ್ಮಿಕ, ಸಮಾಜ ಕಲ್ಯಾಣ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಉಡುಪಿ ನಗರ ಪಾಲಿಕೆ, ಮಕ್ಕಳ ಸಹಾಯವಾಣಿ ಮತ್ತು ನಾಗರಿಕ ಸೇವಾ ಟ್ರಸ್ಟ್ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿವೆ.
11 ಬಾಲಕಿಯರು ಸೇರಿದಂತೆ ರಕ್ಷಿಸಲಾದ ಎಲ್ಲ ಮಕ್ಕಳು ಕೊಪ್ಪಳ ಮತ್ತು ದಾವಣಗೆರೆ ಜಿಲ್ಲೆಗೆ ಸೇರಿದವರಾಗಿದ್ದಾರೆ.
ರಕ್ಷಿಸಲಾದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ (ಸಿಡಬ್ಲ್ಯುಸಿ) ಹಸ್ತಾಂತರಿಸಲಾಗಿದೆ. ಅಲ್ಲಿ ಅವರಿಗೆ ಪುನರ್ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಕುಮಾರ್ ನಾಯ್ಕ್, ಕಾರ್ಮಿಕ ಅಧಿಕಾರಿ ಕುಮಾರ್, ಸಿಎಂಸಿ ಅಧಿಕಾರಿ ನಾಗರಾಜ್, ಸಮಾಜ ಸೇವಕರಾದ ಯೋಗೀಶ್, ಅಂಬಿಕಾ, ನಾಗರಿಕ ಸೇವಾ ಟ್ರಸ್ಟ್ ಮುಖಂಡ ನಿತ್ಯಾನಂದ ಒಳಕಾಡು ಮತ್ತಿತರರು ಪಾಲ್ಗೊಂಡಿದ್ದರು.
Follow us on Social media