ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀನಗರ ಆರನೆ ಕ್ರಾಸ್ ನ ಮನೆಯೊಂದರ ಬಾವಿಯ ಪಂಪ್ ಸೆಟ್ ದುರಸ್ತಿ ಸಮಯದಲ್ಲಿ ನಡೆದ ವಿದ್ಯುತ್ ಅವಘಡದಿಂದಾಗಿ ಎಸೆಸೆಲ್ಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಲಕ್ಷ್ಮೀನಗರದ ಮಂಜುನಾಥ್ ನಾಯಕ್ ಎಂಬವರ ಮಗ ಗೌತಮ್(15) ಮೃತ ದುರ್ದೈವಿ.
ಈತ ಮಂಜುನಾಥ್ ನಾಯಕ್‌ರ ಒಬ್ಬನೇ ಮಗನಾಗಿದ್ದು, ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯ ಪ್ರತಿಭಾವಂತ ಎಸೆಸೆಲ್ಸಿ ವಿದ್ಯಾರ್ಥಿಯಾಗಿದ್ದಾನೆ. ಗೌತಮ್ ಇತ್ತೀಚೆಗಷ್ಟೇ ಎಸೆಸೆಲ್ಸಿ ಪರೀಕ್ಷೆ ಬರೆದು ಉತ್ತಮ ಅಂಕಗಳನ್ನು ಪಡೆದಿದ್ದ ಎನ್ನಲಾಗಿದೆ.
ನೆರೆಮನೆಯವರು ತಮ್ಮ ಬಾವಿಯಿಂದ ಪಂಪ್‌ಸೆಟ್ ಮೇಲಕ್ಕೆತ್ತುವಾಗ ಅಲ್ಲೇ ಸಮೀಪದಲ್ಲಿ ಇದ್ದ ಗೌತಮ್ ವಿದ್ಯುತ್ ಶಾಕ್ ಗೆ ಒಳಗಾಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media