Breaking News

ಉಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ

ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಉಪ್ಪಳದಲ್ಲಿ ಸರಕು ಲಾರಿ ರಸ್ತೆಗಡ್ಡವಾಗಿ ಮಗುಚಿ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದ್ದು , ಇದರಿಂದ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಮಂಗಳೂರು ಕಡೆಯಿಂದ ಮೊಬೈಲ್ ಟವರ್ ನಿರ್ಮಾಣದ ಸಾಮಾಗ್ರಿ ಹೇರಿಕೊಂಡು ಕಾಸರಗೋಡಿನತ್ತ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಅಪಘಾತದ ಬಳಿಕ ಬೆಳಿಗ್ಗಿನಿಂದ ಕಾಸರಗೋಡು – ಮಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಲಾರಿಯನ್ನು ತೆರೆವುಗೊಳಿಸುವ ಕಾರ್ಯ ನಡೆಯುತ್ತಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×