ಉಪ್ಪಿನಂಗಡಿ : ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಶಾಲೆಗೆ ಬಿಡುವ ಆಮಿಷವೊಡ್ಡಿ , ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಮಾಡಿರುವುದಾಗಿ ಆರೋಪಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಮುನಾಸೀರ್ ಎಂದು ಗುರುತಿಸಲಾಗಿದೆ13ರ ಹರೆಯ ಬಾಲಕಿಯನ್ನು ನೆರೆಮನೆಯನಾದ ಯುವಕ ಮುನಾಸೀರ್ ಎಂಬಾತ ಮೇ 30ರಂದು ಶಾಲೆಗೆ ಕರೆದುಕೊಂಡು ಹೋಗುವುದಾಗಿ ತಿಳಿಸಿ ಕಾರಿನಲ್ಲಿ ಉಪ್ಪಿನಂಗಡಿಯ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ, ಇದಾದ ಬಳಿಕ ಮತ್ತೆ ಜೂನ್ 7 ರ ಮಂಗಳವಾರ ಬಾಲಕಿ ಮನೆಯಿಂದ ಹೊರಟು ಶಾಲೆಯತ್ತ ನಡೆದುಕೊಂಡು ಹೋಗುತ್ತಿದ್ದಾಗ, ಆರೋಪಿ ಬಲವಂತವಾಗಿ ಕಾರಿನಲ್ಲಿ ಕೂರಿಸಿ ಉಪ್ಪಿನಂಗಡಿಯ ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಮಾತ್ರವಲ್ಲ ಈ ವಿಚಾರವನ್ನು ಯಾರಿಗಾದರು ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಿಟ್ಟು ಪರಾರಿಯಾಗಿದ್ದ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.ಉಪ್ಪಿನಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
Follow us on Social media