ಎರ್ನಾಕುಲಂ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧಿಸಲಾಗಿದೆ. ವಿಚಾರಣೆಗಾಗಿ ಎರ್ನಾಕುಲಂ ದಕ್ಷಿಣ ಪೊಲೀಸ್ ಠಾಣೆಗೆ ಹಾಜರುಪಡಿಸಿದ ನಂತರ ಅವರನ್ನು ಬಂಧಿಸಲಾಗಿದೆ.
- ಸಿನಿಮಾಗಳಲ್ಲಿ ಪಾತ್ರ ನೀಡುವುದಾಗಿ ಹೇಳಿ ಯುವ ನಟಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ವಿಜಯ್ ಬಾಬು ವಿರುದ್ಧ ಕೇಳಿಬಂದಿತ್ತು. ಎರ್ನಾಕುಲಂ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿತ್ತು. ಜೂನ್ 22 ರಂದು ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ಸೋಮವಾರದೊಳಗೆ ಬೆಳಗ್ಗೆ 9 ಗಂಟೆಯೊಳಗೆ ಒಂದು ವಾರ ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ಹೈಕೋರ್ಟ್ ಸೂಚಿಸಿತ್ತು.ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುರಸ್ಕರಿಸುವ ವೇಳೆ ಕೇರಳ ಹೈಕೋರ್ಟ್, ರಾಜ್ಯವನ್ನು ತೊರೆಯದಂತೆ ಮತ್ತು ಅವರ ಪಾಸ್‌ಪೋರ್ಟ್ ಸಲ್ಲಿಸುವಂತೆ ಹೇಳಿದೆ .ದೂರು ನೀಡಿದ ಯುವ ನಟಿಯ ಗುರುತನ್ನು ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಿದ ಆರೋಪವೂ ನಟ ವಿಜಯ್ ಮೇಲಿದೆ.ಮಲಯಾಳಂ ಚಲನಚಿತ್ರ ಕಲಾವಿದರ ಸಂಘ (ಅಮ್ಮ) ವಿಜಯ್ ಬಾಬು ಅವರಿಗೆ ಬೆಂಬಲ ನೀಡಿದೆ. ನ್ಯಾಯಾಲಯದ ತೀರ್ಪಿನ ನಂತರವಷ್ಟೇ ನಟ ವಿಜಯ್ ಬಾಬು ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಚಲನಚಿತ್ರ ಕಲಾವಿದರ ಸಂಘ ಹೇಳಿದೆ.