Breaking News

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಧಾರವಾಡ/ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ  ಪ್ರಸಕ್ತ ಸಾಲಿನ  ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್‌ ಬದಲಿಗೆ, ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್‌ಕುಮಾರ್, ಈ  ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದರು.

ಜೂನ್ 21- ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಜೂ.24-ಗಣಿತ, ಜೂ. 28-ವಿಜ್ಞಾನ, ಜೂ. 30-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜುಲೈ2- ದ್ವಿತೀಯ ಭಾಷೆ ಇಂಗ್ಲಿಷ್/ಕನ್ನಡ, ಜು.5- ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×