ಬೆಂಗಳೂರು: ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸೇರಿದಂತೆ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಕಷ್ಟ.ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುವುದನ್ನು ತಡೆಯಬೇಕಿರುವುದು ನಮ್ಮ ಮುಂದಿರುವ ಸವಾಲಾಗಿದೆ. ಈ ನಿಟ್ಟಿನಲ್ಲಿ ಈ ತಿಂಗಳ 27ರಿಂದ ನಡೆಯಬೇಕಿದ್ದ ಹತ್ತನೇ ತರಗತಿ ಪರೀಕ್ಷೆ ಸೇರಿ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸರ್ಕಾರದ ಬಾಲಬ್ರೂಯಿ ಅತಿಥಿಗೃಹವನ್ನು ಕೊರೋನಾ ವಾರ್ ರೂಂ ಬಳಕೆಗೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Follow us on Social media