ನವದೆಹಲಿ: ಆರ್ಥಿಕ ವರ್ಷ 2019-20ರ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಕೆಯ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಪ್ರಕಟಿಸಿದೆ.
ಸದ್ಯಕ್ಕಿರುವ ಪರಿಸ್ಥಿತಿಯನ್ನು ಮನಗಂಡು ಐಟಿಆರ್ ಸಲ್ಲಿಕೆ ಅವಧಿಯನ್ನು ನವೆಂಬರ್ 30ರವರೆಗೂ ವಿಸ್ತರಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆಯು ಟ್ವೀಟ್ ನಲ್ಲಿ ಹೇಳಿದೆ.
ಎರಡು ದಿನಗಳ ಹಿಂದಷ್ಟೇ ಇದಕ್ಕೆ ಪೂರಕವಾದ ಕ್ರಮಗಳನ್ನ ಐಟಿ ಇಲಾಖೆ ಕೈಗೊಂಡಿತ್ತು. ತೆರಿಗೆ ಉಳಿತಾಯದ ಹೂಡಿಕೆಗಳಿಗೆ ಇದ್ದ ಗಡುವನ್ನು ಜುಲೈ 31ರವರೆಗೆ ವಿಸ್ತರಿಸಿತ್ತು. ಇದರಿಂದ ಹೂಡಿಕೆದಾರರ ತಮ್ಮ ಹಣವನ್ನ ಈ ಯೋಜನೆಗಳಿಗೆ ಹಾಕಿ ಆ ಮೂಲಕ ತೆರಿಗೆ ಕಡಿಮೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಈ ಹೂಡಿಕೆಗಳನ್ನ ಐಟಿ ರಿಟರ್ನ್ ಸಲ್ಲಿಕೆ ವೇಳೆ ನಮೂದಿಸಿ ತೆರಿಗೆ ಹಣ ಕ್ಲೈಮ್ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಹಾಗಾಗಿ, ಉಳಿತಾಯ ಯೋಜನೆಗೆ ಹೂಡಿಕೆ ಮಾಡುವ ಗಡುವು ಹಾಗೂ ಐಟಿ ರಿಟರ್ನ್ ಫೈಲ್ ಮಾಡುವ ಗಡುವು ಎರಡೂ ಪೂರಕವಾಗಿರುವಂತೆ ಐಟಿ ಇಲಾಖೆ ಎಚ್ಚರ ವಹಿಸಿದೆ.
Follow us on Social media