Breaking News

ಐಪಿಎಲ್ 2020: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 8 ವಿಕೆಟ್ ಗಳ ಭರ್ಜರಿ ಜಯ

ನವದೆಹಲಿ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಕೋಲ್ಕತಾ ನೈಟ್ ರೈಡರ್ಸ್ ತಂಡ ನೀಡಿದ 149ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಮುಂಬೈ ಇಂಡಿಯನ್ಸ್ ತಂಡ ಇನ್ನೂ 19 ಎಸೆತಗಳು ಬಾಕಿ ಇರುವಂತೆಯೇ ತಲುಪಿತು. ಆ ಮೂಲಕ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

ಕೆಕೆಆರ್‌ ಬೌಲರ್‌ಗಳೆದುರು ಲೀಲಾಜಾಲವಾಗಿ ಬ್ಯಾಟ್‌ ಬೀಸಿದ ಕ್ವಿಂಟನ್‌ ಡಿ ಕಾಕ್ ಮತ್ತು ನಾಯಕ ರೋಹಿತ್‌ ಶರ್ಮಾ ಅವರ ಆಟದ ನೆರವಿನಿಂದ ಮುಂಬೈ ತಂಡ 16.5 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 149 ರನ್‌ ಗಳಿಸಿತು. ಬಿರುಸಾಗಿ ಬ್ಯಾಟ್‌ ಬೀಸಿದ ಕ್ವಿಂಟನ್‌ ಕೇವಲ 44 ಎಸೆತಗಳಲ್ಲಿ 3 ಸಿಕ್ಸರ್ ಮತ್ತು  9 ಬೌಂಡರಿ ಸಹಿತ 78 ರನ್ ಬಾರಿಸಿದರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ತಂಡ ಇಯಾನ್ ಮಾರ್ಗನ್ ರ ಅಜೇಯ 39 ರನ್ ಮತ್ತು ಪ್ಯಾಟ್ ಕಮಿನ್ಸ್ ರ ಅಜೇಯ 53 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್ ಗಳನ್ನು ಗಳಿಸಿತು.

ಇದು ಮುಂಬೈಗೆ ಟೂರ್ನಿಯಲ್ಲಿ 6ನೇ ಗೆಲುವು. 8 ಪಂದ್ಯಗಳನ್ನು ಆಡಿರುವ ಈ ತಂಡ 2 ಸೋಲು ಕಂಡಿದ್ದು, ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಕೆಕೆಆರ್‌ ನಾಲ್ಕನೇ ಸ್ಥಾನದಲ್ಲಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×