ಮುಂಬೈ: ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022ರ 30ನೇ ಪಂದ್ಯದಲ್ಲಿ ಯುಜ್ವೇಂದ್ರ ಚಹಾಲ್ ಅವರ ಹ್ಯಾಟ್ರಿಕ್ ವಿಕೆಟ್ ಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಏಳು ರನ್ ಗಳಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು ಬಗ್ಗು ಬಡಿದಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 217 ರನ್ ಕಲೆಹಾಕಿತು. ರಾಜಸ್ಥಾನ ರಾಯಲ್ಸ್ ಪರ ಜೋಸ್ ಬಟ್ಲರ್ 61 ಎಸೆತಗಳಲ್ಲಿ 103 ರನ್ ಗಳಿಸಿದರೆ, ಸಂಜು ಸ್ಯಾಮ್ಸನ್ 38, ಶಿಮ್ರಾನ್ ಹೆಟ್ಮಿಯರ್ 26 ರನ್ ಕಲೆಹಾಕಿದರು. ಕೆಕೆಆರ್ ಪರ ಸುನಿಲ್ ನರೈನ್ 2 ಹಾಗೂ ಆಂಡ್ರೆ ರಸೆಲ್ , ಶಿವಂ ಮಾವಿ ತಲಾ ಒಂದೊಂದು ವಿಕೆಟ್ ಪಡೆದರು.
ರಾಜಸ್ಥಾನ ರಾಯಲ್ಸ್ ನೀಡಿದ 217 ರನ್ ಗಳ ಗುರಿ ಬೆನ್ನತ್ತಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ 19.4 ಓವರ್ ಗಳಲ್ಲಿ 210 ರನ್ ಗಳಿಸಲಷ್ಟೇ ಶಕ್ತವಾಯಿತು. ಕೆಕೆಆರ್ ಪರ ಶ್ರೇಯಸ್ ಅಯ್ಯರ್ 85, ಆರೋನ್ ಫಿಂಚ್ 58, ಉಮೇಶ್ ಯಾದವ್ 21 ರನ್ ಗಳಿಸಿದರು. ರಾಜಸ್ಥಾನ ರಾಯಲ್ಸ್ ಪರ ಯಜ್ವೇಂದ್ರ ಚಹಲ್ 5, ಒಬೆಡ್ ಮೆಕಾಯ್ 2, ಆರ್ ಅಶ್ವಿನ್ 1 ವಿಕೆಟ್ ಪಡೆದರು.
Follow us on Social media