ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ 2022 ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು. ಡೆಲ್ಲಿ ಕ್ಯಾಪಿಟಲ್ಸ್ ಪರ ಡೇವಿಡ್ ವಾರ್ನರ್ 66, ರಿಷಭ್ ಪಂತ್ 34, ಶಾರ್ದುಲ್ ಠಾಕೂರ್ 17 ರನ್ ಗಳಿಸಿದರು. ಆರ್ ಸಿಬಿ ಪರ ಜೋಶ್ ಹೇಜಲ್ ವುಡ್ 3, ಮೊಹಮ್ಮದ್ ಸಿರಾಜ್ 2, ವನಿಂದು ಹಸರಂಗ 1 ವಿಕೆಟ್ ಪಡೆದರು.
ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 173 ರನ್ ಗಳ ಗುರಿ ಬೆನ್ನತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 189 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.
ಆರ್ ಸಿಬಿ ಪರ ದಿನೇಶ್ ಕಾರ್ತಿಕ್ 34 ಎಸೆತಗಳಲ್ಲಿ 66 ರನ್ ಸಿಡಿಸಿದರೆ, ಗ್ಲೇನ್ ಮ್ಯಾಕ್ಸ್ ವೆಲ್ 55, ಮತ್ತು ಶಹಬಾಜ್ ಅಹ್ಮದ್ 32 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ ಮತ್ತು ಖಲೀಲ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು. ದಿನೇಶ್ ಕಾರ್ತಿಕ್ ಪಂದ್ಯ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ಭಾಜನರಾದರು.
Follow us on Social media