ದುಬೈ: ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಗ್ರ ಎರಡು ಸ್ಥಾನಗಳನ್ನು ಅಲಂಕರಿಸಿದ್ದಾರೆ.
ಕೊಹ್ಲಿ 871 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದು 855 ಅಂಕಗಳೊಂದಿಗೆ ರೋಹಿತ್ ಶರ್ಮಾ 2ನೇ ಸ್ಥಾನದಲ್ಲಿದ್ದಾರೆ. ಇನ್ನು ಪಾಕಿಸ್ತಾನ ಬಾಬರ್ ಅಜಾಮ್ 829 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ ಅವರು 719 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲ್ಯಾಂಡ್ ವೇಗಿ ಟ್ರೆಂಟ್ ಬೌಲ್ಟ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ.
Follow us on Social media