Breaking News

ಕಡಬ: ನಾಪತ್ತೆಯಾಗಿದ್ದ ವಿವಾಹಿತೆ ಪ್ರಿಯಕರನೊಂದಿಗೆ ಪತ್ತೆ

ಕಡಬ : ಬೀಡಿ ಬ್ರ್ಯಾಂಚ್ ಗೆಂದು ತೆರಳಿ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆಯೋರ್ವರು ಕೊಯಿಲ ಗ್ರಾಮದ ಸಂಪಡ್ಕ ಎಂಬಲ್ಲಿ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ.

ಕೋಡಿಂಬಾಳ ಗ್ರಾಮದ ದಾಸರಗುಡ್ಡೆ ನಿವಾಸಿ ಬಾಬು ಎಂಬವರ ಪತ್ನಿ ಸುಮತಿ ಎಂಬವರು ಸೋಮವಾರದಂದು ನಾಪತ್ತೆಯಾಗಿದ್ದು, ಈ ಬಗ್ಗೆ ಅವರ ಗಂಡ ಬಾಬು ಅವರು ಕಡಬ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆ ಹಾಗೂ ಆಕೆಯ ಪ್ರಿಯಕರ ವಿನಯ ಎಂಬವರನ್ನು ಕೊಯಿಲ ಸಮೀಪದ ಸಂಪಡ್ಕ ಎಂಬಲ್ಲಿನ ಅವರ ಸಂಬಂದಿಕರ ಮನೆಯಲ್ಲಿ ಪತ್ತೆ ಹಚ್ಚಿ ಠಾಣೆಗೆ ಕರೆ ತಂದಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆಯು ತಾನು ಪ್ರಿಯಕರನ ಜತೆ ಜೀವನ ನಡೆಸುವುದಾಗಿ ಹೇಳಿಕೆ ನೀಡಿದ್ದು, ಈ ಹಿನ್ನಲೆಯಲ್ಲಿ ಪೊಲೀಸರು ವಿನಯನ ಜತೆ ಕಳುಹಿಸಿ ಕೊಟ್ಟಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×