ವ್ಯಕ್ತಿಯೋರ್ವರು ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ.
ಆಲಂಕಾರಿನಲ್ಲಿ ಉದ್ಯಮಿಯಾಗಿರುವ ಚಂದ್ರಶೇಖರ್ ಪೂಜಾರಿ (60) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮನೆಯಲ್ಲಿ ಇಂದು ಬೆಳಗ್ಗೆ ಚೀಟಿ ಬರೆದಿಟ್ಟು, ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನೀರಿಗೆ ಹಾರಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಮತ್ತು ಕಡಬ ಪೊಲೀಸರು ಆಗಮಿಸಿ ಮಾಹಿತಿ ಪಡೆಯುತ್ತಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ ಪೂಜಾರಿ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜೀ ಅಧ್ಯಕ್ಷ ಹಾಗೂ ಪ್ರಸ್ತುತ ನಿರ್ದೇಶಕರಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
Follow us on Social media