ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಬುಧವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
ಬುಧವಾರ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಇದಲ್ಲದೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ಬುಧವಾರ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ಹೇಳಿದೆ.
Follow us on Social media