ಕಾಸರಗೋಡು: ಕರ್ನಾಟಕ ಪಿಯುಸಿ ಪರೀಕ್ಷೆ ಬರೆಯಲಿರುವ ಕಾಸಾರಗೋಡು ಜಿಲ್ಲೆಯ ವಿದ್ಯಾರ್ಥಿಗಳಿಗೆ ಆಯಾ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಕಾಸರಗೋಡು-ದಕ್ಷಿಣ ಕನ್ನಡ ಜಿಲ್ಲಾ ಗಡಿಯಿಂದ ಬಸ್ಸುಗಳ ವ್ಯವಸ್ಥೆ ಕಲ್ಪಿಸಿರುವುದಾಗಿ ಜಿಲ್ಲಾಧಿಕಾರಿ ಡಾ . ಡಿ. ಸಜಿತ್ ಬಾಬು ತಿಳಿಸಿದ್ದಾರೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಜೊತೆ ಮಾತುಕತೆ ನಡೆಸಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಕ್ರಮ ತೆಗೆದು ಕೊಳ್ಳಲಾಗಿದೆ.
ಜೂನ್ 18ರಂದು ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆ ನಡೆಯುತ್ತಿರುವುದರಿಂದ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಗಡಿಯಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಿಂದ 1043 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು.
ಹೆಚ್ಚಿನ ಮಾಹಿತಿ ಗಾಗಿ ಈ ನಂಬರ್ ಸಂಪರ್ಕಿಸುವಂತೆ ತಿಳಿಸಿದೆ. 04994 255145, 9496003201
Follow us on Social media