ನವದೆಹಲಿ :ಪಕ್ಷದಲ್ಲಿ ದೊಡ್ಡ ಮಟ್ಟದ ಬದಾವಣೆಯನ್ನು ಬಯಸಿ ಕಾಂಗ್ರೆಸ್ ಪಕ್ಷದ ಮುಖಂಡರು ತಾತ್ಕಾಲಿಕ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಐದು ಹಿರಿಯ ಮುಖ್ಯಮಂತ್ರಿಗಳು, ಕಾಂಗ್ರೆಸ್ ಕಾರ್ಯಕಾರಣಿ ಸಮಿತಿ ಸದಸ್ಯರು, ಲೋಕಸಭಾ ಸದಸ್ಯರು, ಮಾಜಿ ಕೇಂದ್ರ ಮಂತ್ರಿಗಳು ಸೇರಿದಂತೆ 23 ಮುಖಂಡರು ಸೋನಿಯಾ ಅವರಿಗೆ ಬರೆದ ಪತ್ರದಲ್ಲಿ ಸಹಿ ಮಾಡಿದ್ದಾರೆ.
ಇತ್ತೀಚಿಗಿನ ದಿನಗಳಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ದೊರೆಯುತ್ತಿದ್ದು, ಯುವಜನತೆ ನರೇಂದ್ರ ಮೋದಿಯವರತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ತಳಹದಿ ಅಲುಗಾಡುತ್ತಿದ್ದು ಪಕ್ಷದ ಮೇಲಿನ ಯುವಜನತೆಯ ಆತ್ಮವಿಶ್ವಾಸ ನಷ್ಟವಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದಲ್ಲದೆ ಪಕ್ಷದ ಪ್ರಸ್ತುತ ಕೆಲ ಮುಖಂಡರ ಹಾಗೂ ಅವರ ಕಾರ್ಯವೈಖರಿಯ ಬಗ್ಗೆ ಈ ಮುಖಂಡರು ತೀವೃ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಎರಡು ವಾರಗಳ ಹಿಂದೆ ಈ ಪತ್ರವನ್ನು ತಯಾರು ಮಾಡಿ ಕಳುಹಿಸಿಕೊಡಲಾಗಿತ್ತು ಎಂದು ತಿಳಿದುಬಂದಿದೆ. ಪತ್ರಕ್ಕೆ ಸಹಿ ಹಾಕಿದ ಮುಖಂಡರು ಪಕ್ಷಕ್ಕೆ, ಪೂರ್ಣಾವಧಿಯ ಹಾಗೂ ಪೂರ್ಣಪ್ರಮಾಣದ ಅಧ್ಯಕ್ಷರನ್ನು ನೇಮಕ ಮಾಡುವಂತೆ ಕೋರಿಕೊಂಡಿದ್ದಾರೆ.
Follow us on Social media