ಮಣಿಪುರ: ಇತ್ತೀಚಿಗೆ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಐವರು ಮಾಜಿ ಕಾಂಗ್ರೆಸ್ ಶಾಸಕರು ಇಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸಮ್ಮುಖದಲ್ಲಿ ಆಡಳಿತರೂಢ ಬಿಜೆಪಿ ಪಕ್ಷವನ್ನು ಸೇರ್ಪಡೆಯಾದರು.
ಮಾಜಿ ಕಾಂಗ್ರೆಸ್ ಶಾಸಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಮಣಿಪುರದಲ್ಲಿ ಇದೀಗ ಬಿರೇನ್ ಸಿಂಗ್ ಆಡಳಿತಕ್ಕೆ ಬೆದರಿಕೆ ಇಲ್ಲ ಎಂದರು.
ಮಣಿಪುರದಲ್ಲಿ ಬಿಜೆಪಿ ಸರ್ಕಾರ ಆಡಳಿತಾವಧಿ ಪೂರ್ಣಗೊಳಿಸುವುದು ಮಾತ್ರವಲ್ಲದೇ ಮುಂದಿನ ಬಾರಿಯೂ ಪುನರ್ ಆಯ್ಕೆಯಾಗಲಿದೆ ಎಂದು ರಾಮ್ ಮಾಧವ್ ಹೇಳಿದರು.
Follow us on Social media