ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅನಾರೋಗ್ಯದ ನಿಮಿತ್ತ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
79 ವರ್ಷ ಪ್ರಾಯದ ಆಸ್ಕರ್ ಫರ್ನಾಂಡಿಸ್ ಅವರು ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ನಗರದ ಕೊಡಿಯಾಲಬೈಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿಲಾಗುತ್ತಿದೆ.
ಹಿರಿಯ ಕಾಂಗ್ರೆಸ್ ಮುಖಂಡ ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದರೂ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಉಡುಪಿ ಮೂಲದವರಾದ ಆಸ್ಕರ್ ಫರ್ನಾಂಡಿಸ್ ಅವರು ಉಡುಪಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ.
Follow us on Social media