ಮಂಗಳೂರು: ಜಿಲ್ಲೆಯ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.
ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ, ತಮಗೆ ಕೊರೋನಾ ಸೋಂಕು ತಗುಲಿರುವುದನ್ನು ಸ್ಪಷ್ಟಪಡಿಸಿದ್ದಾರೆ.
ಮಿಥುನ್ ರೈ ಪೋಸ್ಟ್ ಮಾಡಿರುವುದೇನು ?
ನನಗೆ ಕೊರೋನಾ ಪಾಸಿಟಿವ್ ಆಗಿದೆ ಮತ್ತು ನಾನು ಬೆಂಗಳೂರಿನಲ್ಲಿ ಕ್ಯಾರೆಂಟೈನ್ ನಲ್ಲಿದ್ದೇನೆ. ನಿಮ್ಮ ಎಲ್ಲಾ ಪ್ರೀತಿ ಮತ್ತು ಆಶೀರ್ವಾದಗಳೊಂದಿಗೆ, ನಾನು ಚೇತರಿಸಿಕೊಳ್ಳುತ್ತೇನೆ ಮತ್ತು ಶೀಘ್ರದಲ್ಲೇ ನಿಮ್ಮ ಸೇವೆಗೆ ಮರಳುತ್ತೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಎಲ್ಲ ನನ್ನ ಆತ್ಮೀಯರು ಕೂಡಲೇ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ವಿನಂತಿ ಮಾಡಿದ್ದಾರೆ.