ಕಾರ್ಕಳ : ಸೋಮವಾರ ಮಧ್ಯಾಹ್ನ ಸಿಡಿಲ ಅಘಾತದಿಂದಾಗಿ ವ್ಯಕ್ತಿ ದಾರುಣವಾಗಿ ಮೃತಪಟ್ಟ ಘಟನೆ ಈದು ನೂರಾಲ್‌ಬೆಟ್ಟು ಎಂಬಲ್ಲಿ ಸಂಭವಿಸಿದೆ.
ಜಿಗೀಶ್ ಜೈನ್ ನೂರಾಲ್‌ಬೆಟ್ಟು(41) ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಮಳೆ ಬರುತ್ತಿದೆ ಎಂಬ ಕಾರಣಕ್ಕಾಗಿ ಕೃಷಿ ಕಾಯಕ ಮುಗಿಸಿ ಮನೆಯ ಕಡೆಗೆ ಬರುತ್ತಿದ್ದಾಗ, ಏಕಾಏಕಿ ಸಿಡಿಲು ಬಡಿದ ಪರಿಣಾಮದಿಂದಾಗಿ ಅವರು ಗಂಭೀರಗೊಂದಿದ್ದಾರೆ. ಬಳಿಕ ಆಸ್ಪತ್ರೆಗೆ ರವಾನಿಸಲಾಯಿತಾದರೂ ಪ್ರಾಣ ಉಳಿಸಲು ಸಾಧ್ಯವಾಗಿಲ್ಲ.ಘಟನಾ ಸ್ಥಳಕ್ಕೆ ತಹಶೀಲ್ದಾರ್, ಕಂದಾಯ ನಿರೀಕ್ಷಕರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.
Follow us on Social media