ಕಾರ್ಕಳ: ಸಾಲಬಾಧೆಯಿಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ತೆಳ್ಳಾರಿನ ದೇಲೊಟ್ಟುವಿನಲ್ಲಿ ನಡೆದಿದೆ.
ದೇಲೊಟ್ಟುವಿನ ದಯಾನಂದ ಎಂಬವರೇ ಆತ್ಮಹತ್ಯೆಗೆ ಶರಣಾದ ಯುವಕ.
ದಯಾನಂದ ಅವರು ಬುಧವಾರ ಬೆಳಿಗ್ಗೆ ಮನೆಯಿಂದ ಹೊರಟವರು ವಾಪಸ್ ಮನೆಗೆ ಬಾರದೇ ನಾಪತ್ತೆಯಾಗಿದ್ದರು.
ಹುಡುಕಾಡಿದಾಗ ಸಂಬಂಧಿಕರ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದ ಸ್ಥಿತಿಯಲ್ಲಿ ದಯಾನಂದ ಅವರ ಮೃತದೇಹ ಪತ್ತೆಯಾಗಿದೆ.
ಎಲೆಕ್ಟ್ರಿಷನ್ ಕೆಲಸ ಮಾಡಿಕೊಂಡಿದ್ದ ಅವರು ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Follow us on Social media