ಶ್ರೀನಗರ; ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಮೂವರು ಸಿಆರ್ ಪಿಎಫ್ ಯೋಧರನ್ನು ಬಲಿ ಪಡೆದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕ್ರಾಲ್ ಗುಂಡ್ ನ ವಾಂಗಾಮ್ ಖಾಜಿಯಾಬಾದ್ ನಲ್ಲಿ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ಈ ದಿಢೀರ್ ದಾಳಿಯಿಂದಾಗಿ ಕರ್ತವ್ಯ ನಿರತರಾಗಿದ್ದ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ 7 ಸೈನಿಕರು ಗಾಯಗೊಂಡಿದ್ದು, ಗಾಯಾಳು ಸೈನಿಕರನ್ನು ಸೇನಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರಸ್ತುತ ಉಗ್ರರು ದಾಳಿ ನಡೆಸಿರುವ ಇಡೀ ಪ್ರದೇಶವನ್ನು ಸೇನೆ ಸುತ್ತುವರೆದಿದ್ದು, ಹೆಚ್ಚುವರಿ ಭದ್ರತಾ ಪಡೆಗಳ ತಂಡ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆಗೆಳಿದಿವೆ.
Source : ANI
Follow us on Social media