ಕಾಸರಗೋಡು : ಇಂದು ಮುಂಜಾನೆ ಗ್ಯಾಸ್ ಟ್ಯಾಂಕರ್‍ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಾಸರಗೋಡಿನ ಅಡ್ಕತ್ತಬೈಲ್ ನಲ್ಲಿ ನಡೆದಿದೆ.
ಮಂಗಳೂರಿನಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು, ಮುನ್ನಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಇನ್ನೊಂದು ಮಾರ್ಗದಿಂದ ಕಳುಹಿಸಲಾಗಿದ್ದು, ಕಾಸರಗೋಡು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ಗ್ಯಾಸ್ ಟ್ಯಾಂಕರ್ ಅಪಘಾತ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಯು ಇಂದು ಅಡ್ಕತ್ತಬೈಲ್ ಶಾಲೆಗೆ ರಜೆಯನ್ನು ಘೋಷಿಸಿದ್ದಾರೆ.
Follow us on Social media