ಕುಂದಾಪುರ: ಭತ್ತದ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿರುವಾಗಲೇ ಕೃಷಿಕರೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ನಿನ್ನೆ ನಡೆದಿದೆ.
ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ನಿವಾಸಿ ಪ್ರಸ್ತುತ ಕುಂದಾಪುರ ವಂಡ್ಸೆಯಲ್ಲಿ ವಾಸವಿದ್ದ ಕಾಂತುರಾಜು (40) ಮೃತ ದುರ್ದೈವಿ.
ದಿಟಿ ಎಂಬಲ್ಲಿ ಸ್ಥಳೀಯ ನಿವಾಸಿಯೊಬ್ಬರು ಗೇಣಿಗೆ ಪಡೆದಿದ್ದ ಗದ್ದೆಯಲ್ಲಿ ಉಳುಮೆ ಮಾಡಲು ಟ್ರಾಕ್ಟರ್‌ನ್ನು ಪಡೆದಿದ್ದರು. ನಿನ್ನೆ ಅದರ ಚಾಲಕ ಕಾಂತುರಾಜು ಟ್ರಾಕ್ಟರ್‌ನಿಂದ ಗದ್ದೆ ಉಳುಮೆ ಮಾಡುತ್ತಿದ್ದರು.
ಈ ಸಂದರ್ಭ ಅವರ ಜೊತೆ ನಾಲ್ಕೈದು ಜನ ಕೆಲಸದಲ್ಲಿ ತೊಡಗಿಕೊಂಡಿದ್ದರು. ಮಧ್ಯಾಹ್ನ ಊಟದ ವೇಳೆಯಲ್ಲಿ ಟ್ರಾಕ್ಟರ್ ನಿಲ್ಲಿಸಿ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಏಕಾಏಕಿ ಕುಸಿದು ಬಿದ್ದರೆನ್ನಲಾಗಿದೆ.
ಸ್ಥಳದಲ್ಲಿದ್ದವರು ಕೂಡಲೇ ಅವರನ್ನು ಖಾಸಗಿ ಆ್ಯಂಬುಲೆನ್ಸ್‌ನಲ್ಲಿ ಚಿಕಿತ್ಸೆಗೆ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು ಪರೀಕ್ಷಿಸಿದಾಗ ಸಾವನ್ನಪ್ಪಿರುವುದು ಸ್ಪಷ್ಟವಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media