ಕುಂದಾಪುರ : ಸಪ್ಲಿಮೆಂಟರಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಫಲಿತಾಂಶ ಬರುವ ಮೊದಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.30 ರ ಗುರುವಾರ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
- ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ, ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮ ದ ಒಡ್ಡನಗದ್ದೆ ಬಾಬಣ್ಣ ಕುಲಾಲರ ಮಗಳು ಮಾನಸ (17) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ.ಎಪ್ರಿಲ್ ತಿಂಗಳ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದು ಮನೆಯಲ್ಲಿಯೇ ಇದ್ದು ಜೂನ್ ತಿಂಗಳ ಸಪ್ಲಿಮೆಂಟರಿ ಪರೀಕ್ಷೆಗೆ ಕಟ್ಟಿದ್ದು, ಜೂನ್ ೩೦ ರಂದು ಪ್ರಥಮ ಪಿಯುಸಿಯ ಫಲಿತಾಂಶವಾಗಿದ್ದರಿಂದ ಮಾನಸಳು ತಾನು ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಬಹುದು ಎಂದು ಭಯಪಟ್ಟೂ ಗುರುವಾರ ಮನೆಯಲ್ಲಿ ಯಾರೂ ಇಲ್ಲದ ಸಮಯ ತನ್ನ ಮನೆಯ ಬಳಿ ಇರುವ ಹುಲ್ಲು ಹಾಕುವ ಕೊಟ್ಟಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821