ಕುಂಬಳೆ: ಎದೆಹಾಲು ಗಂಟಲಲ್ಲಿ ಸಿಲುಕಿ ಒಂದೂವರೆ ವರ್ಷದ ಕಂದಮ್ಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕುಂಬಳೆಯ ಮಧೂರಿನಲ್ಲಿ ನಡೆದಿದೆ.
ಮಧೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್ ಅವರ ಹೆಣ್ಣು ಮಗುವಾದ ಒಂದೂವರೆ ವರ್ಷದ ಇನಿಯ ಕಾರ್ತೋನ್ ಗೆ ಎದೆಹಾಲು ಗಂಟಲಲ್ಲಿ ಸಿಲುಕಿ ಮೃತಪಟ್ಟಿದೆ.
ತಾಯಿ ಮಗುವಿಗೆ ಎದೆಹಾಲು ಉಣಿಸುತ್ತಿರುವಾಗ ಹಾಲು ಗಂಟಲಲ್ಲಿ ಸಿಲುಕಿ ಮಗು ಒದ್ದಾಡಿದೆ. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.
ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow us on Social media