ಉಡುಪಿ : ಕೃಷಿಯೋಗ್ಯ ಭೂಮಿಯನ್ನು ಪಾಳು ಬಿಟ್ಟು ಸರ್ಕಾರದ ಸೌಲಭ್ಯ ಪಡೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಚಿಂತನೆ ನಡೆಸುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಸೋಮವಾರ ಉಡುಪಿ ಜಿಲ್ಲಾ ಕೃಷಿ ಪ್ರಗತಿ ಪರೀಶೀಲನಾ ಸಭೆ ನಡೆಸಿದ ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ” ಕೆಲವಾರು ಕೃಷಿಕರು ತಮ್ಮ ಮಾಲೀಕತ್ವದ ಭೂಮಿಯಲ್ಲಿ ಕೃಷಿ ಮಾಡುತ್ತಿಲ್ಲ. ಆದರೂ ಪಹಣಿ ಮುಖಾಂತರ ಕೇಂದ್ರ – ರಾಜ್ಯ ಸರ್ಕಾರಗಳ ಸೌಲಭ್ಯ ಪಡೆಯುತ್ತಿದ್ದಾರೆ” ಎಂಬ ಸುದ್ದಿಗಾರರ ಪ್ರಶ್ನೆಗೆ ಸಚಿವರು, ಕೃಷಿಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಸದೇ ಸರ್ಕಾರದ ಸೌಲಭ್ಯ ಪಡೆಯುವಂಥ ಪ್ರಕರಣಗಳಿದ್ದರೆ ಅದನ್ನು ಕೂಲಂಕುಷವಾಗಿ ಪರಿಶೀಲಿಸಿ ಅಂತಹವರ ಸೌಲಭ್ಯ ಸ್ಥಗಿತಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ತಿಳಿಸಿದರು.
Follow us on Social media