ಮುಜಾಫರ್‌ನಗರ: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ನಡೆಸುತ್ತಿರುವ ಆಂದೋಲನ ಬೆಂಬಲಿಸಿ ಉತ್ತರ ಪ್ರದೇಶ ಬಿಜೆಪಿ ನಾಯಕಿ ಪ್ರಿಯಮ್‌ವಾಡ ಅವರು ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯದಲ್ಲಿ ನಡೆಯುವ ಪಂಚಾಯತ್ ಚುನಾವಣೆಗೂ ಮುನ್ನ ತೋಮರ್ ಅವರು ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರಿಗೆ ರಾಜೀನಾಮೆ ರವಾನಿಸಿರುವ ತೋಮರ್ ಅವರು, ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರ, ಹೊಸ ಕೃಷಿ ಕಾನೂನುಗಳ ವಿರುದ್ಧ ನಾಲ್ಕು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಅವರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಪತ್ರದಲ್ಲಿ ದೂರಿದ್ದಾರೆ.
ಬಿಜೆಪಿಯ “ರೈತ ವಿರೋಧಿ” ನೀತಿಯಿಂದಾಗಿ ತಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ತೋಮರ್ ಹೇಳಿದ್ದಾರೆ.
Follow us on Social media