ಬೆಂಗಳೂರು: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಸಮರ್ಥಿಸಿಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಮತ್ತು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರ ಕೊಡುಗೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
ದೇವೇಗೌಡ ಅವರು ನಮ್ಮ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ. ಅವರಿಗೆ ಆಭಾರಿಯಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸದನದಲ್ಲಿ ಕೃಷಿಗೆ ಸಂಬಂಧಿಸಿದ ಚರ್ಚೆಗಳಲ್ಲಿ ಎಚ್.ಡಿ. ದೇವೇಗೌಡಜೀ ಕೊಡುಗೆಯನ್ನು ನಾನು ಪ್ರಶಂಸಿಸುತ್ತೇನೆ. ಅವರ ಮಾತುಗಳು ಚರ್ಚೆಗೆ ಉತ್ತಮ ದೃಷ್ಟಿಕೋನವನ್ನು ನೀಡಿವೆ. ಅವರು ಸ್ವತಃ ಕೃಷಿ ಕ್ಷೇತ್ರದೊಂದಿಗೆ ಬಲವಾದ ಒಡನಾಟವನ್ನು ಹೊಂದಿದ್ದಾರೆ’ ಎಂದು ಮೋದಿ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಗುರುವಾರ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿದ್ದ ದೇವೇಗೌಡರು, ಸರ್ಕಾರ ಸೌಹಾರ್ದಯುತವಾಗಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ರೈತ ಸಂಘಟನೆಗಳ ಪ್ರತಿನಿಧಿಗಳನ್ನೂ ಮಾತುಕತೆಗೆ ಕರೆಯಲಿ, ನನ್ನಂತಹ ಈ ಸದನದ ಕೆಲವು ಸದಸ್ಯರನ್ನೂ ಕರೆಯಲಿ. ಬಿಕ್ಕಟ್ಟು ಇತ್ಯರ್ಥಕ್ಕೆ ನಮ್ಮ ಅನುಭವದಿಂದ ನಾವೂ ಕೆಲವು ಸಲಹೆಗಳನ್ನು ನೀಡುತ್ತೇವೆ. ಮಾತುಕತೆ ನಡೆಸದೇ ಇದ್ದರೆ ಸಮಸ್ಯೆ ಮತ್ತಷ್ಟು ಕಗ್ಗಂಟಾಗುತ್ತದೆ” ಎಂದು ಹೇಳಿದ್ದರು.
ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಜಂಟಿ ಅಧಿವೇಶನದಲ್ಲಿ ನಡೆದಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಭಾಷಣವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಬಹಿಷ್ಕರಿಸಿದ್ದರು. ಈ ಮೂಲಕ ರೈತರ ಪ್ರತಿಭಟನೆಗೆ ಕಾಂಗ್ರೆಸ್, ಆಮ್ ಆದ್ಮಿ ಪಕ್ಷಗಳ ಜೊತೆಗೆ ಜೆಡಿಎಸ್ ಕೂಡ ಬೆಂಬಲ ಸೂಚಿಸಿತ್ತು.
ರಾಜ್ಯದಲ್ಲಿ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಿದ್ದು, ಪರಿಷತ್ ಉಪ ಸಬಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಇದಕ್ಕೆ ಋಣ ತೀರಿಸಲು ಸವರಾಜ ಹೊರಟ್ಟಿ ಅವರು ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಲು ಜೆಡಿಎಸ್ ಗೆ ಬಿಜೆಪಿ ಬೆಂಬಲ ನೀಡುತ್ತಿದೆ.
ಕಳೆದ ವರ್ಷದ ಡಿಸೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ತಮ್ಮ ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರಿಗೆ ಜನ್ಮ ದಿನ್ಜದ ಶುಭಾಶಯ ತಿಳಿಸಿದ್ದರು, ಇದು ಜೆಡಿಎಸ್ -ಬಿಜೆಪಿ ಮೈತ್ರಿಯ ಬಗ್ಗೆ ಸುಳಿವು ನೀಡಿತ್ತು.
Follow us on Social media