ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಕಾಮಗಾರಿಗಳನ್ನು ತಕ್ಷಣವೇ ಪೂರ್ಣಗೊಳಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಯೋಜನೆಗೆ ಅಗತ್ಯವಾಗಿರುವ ಭೂಸ್ವಾಧೀನ, ಪುನರ್ ವಸತಿ ಮತ್ತು ಪುನರ್ ನಿರ್ಮಾಣದ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ಎಂದು ಆದೇಶಿಸಿದರು.
ರೈತರ ಹಿತಾಸಕ್ತಿ ಕಾಪಾಡಿಕೊಂಡು ಪುನರ್ವಸತಿ ಕಾರ್ಯ ಮುಗಿಸಬೇಕು. ಆಲಮಟ್ಟಿ ಆಣೆಕಟ್ಟೆಯ ಎತ್ತರವನ್ನು 519 ಅಡಿಯಿಂದ 524 ಅಡಿಗೆ ಎತ್ತರಿಸುತ್ತಿರುವ ಕಾಮಗಾರಿಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯರಾಮ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Source : UNI
Follow us on Social media