ಮಂಗಳೂರು : ಮೂರು ತಿಂಗಳಿದ ಸತತವಾಗಿ ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್ ವಿರುದ್ಧ ವ್ಯಾಪಕ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದಿಂದ ನಂದಿನಿ ಉತ್ಪನ್ನಗಳ ಕಿಟ್ಗಳನ್ನು ವಿತರಿಸಲಾಯಿತು.
ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕಿಟ್ ವಿತರಣೆ ಮಾಡಲಾಯಿತು. ಜಿಲ್ಲೆಯ 1,378 ಆಶಾ ಕಾರ್ಯಕರ್ತೆಯರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿಟ್ ವಿತರಣೆ ಮಾಡಿದರು.
ಒಕ್ಕೂಟ ಅಧ್ಯಕ್ಷ ರವಿರಾಜ್ ಹೆಗ್ಡೆ ಮಾತನಾಡಿ, ಜಿಲ್ಲೆಯಲ್ಲಿ ಕೊರೋನ ವೈರಸ್ ರೋಗವು ದಿನದಿಂದ ದಿನಕ್ಕೆ ವ್ಯಾಪಾಕವಾಗಿ ಹರಡುತ್ತಿದೆ. ಕೊರೋನ ವಾರಿಯರ್ಗಳಾದ ಆಶಾ ಕಾರ್ಯಕರ್ತೆರು ಪ್ರತಿ ಮನೆ ಮನೆಗಳಿಗೆ ಭೇಟಿ ನೀಡಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮತ್ತು ಹೋಂ ಕ್ವಾರೆಂಟೈನ್ನಲ್ಲಿ ಇರುವವರ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ನೀಡಿ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವಿಕೆಯಲ್ಲಿ ಕಾರ್ಯಕರ್ತೆಯರು ಬಹು ಮುಖ್ಯ ಪಾತ್ರ ವಹಿಸುತ್ತಿದ್ದಾರೆ. ಅವರ ಸೇವೆ ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಹಾಲು ಒಕ್ಕೂಟದ ನಿರ್ದೇಶಕ ಡಾ.ಜಿ.ವಿ. ಹೆಗಡೆ, ಸಹಕಾರಿ ಇಲಾಖೆಯ ಉಪನಿಬಂಧಕ ಪ್ರವೀಣ್ ನಾಯಕ್ ಒಕ್ಕೂಟದ ಸಿಬ್ಬಂದಿ ಉಪಸ್ಥಿತರಿದ್ದರು.
Follow us on Social media