ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾಗಬೇಕೆಂದು ಕೆಲವು ನಾಯಕರು ಪಟ್ಟು ಹಿಡಿದಿರುವ ಬೆನ್ನಲ್ಲೇ ಗಾಂಧಿ ಕುಟುಂಬದ ನಾಯಕತ್ವದ ಕುರಿತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ ‘ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಸತ್ತೆಯನ್ನೇ ನಾಶ ಮಾಡಲು ಹೊರಟಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲು ನಾವೆಲ್ಲರೂ ಪ್ರಯತ್ನಿಸಬೇಕೇ ಹೊರತು ದುರ್ಬಲಗೊಳಿಸುವುದಲ್ಲ’ ಎಂದು ಹೇಳಿದ್ದಾರೆ.
ಇದೇ ವಿಚಾರವಾಗಿ ಮಾತನಾಡಿದರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಗಾಂಧಿ ಕುಟುಂಬದ ನಾಯಕತ್ವದಿಂದಲೇ ಕಾಂಗ್ರೆಸ್ ಒಗ್ಗಟ್ಟಾಗಿದೆ. ಚುನಾವಣೆಯಲ್ಲಿನ ಸೋಲು ನಾಯಕತ್ವದ ಬದಲಾವಣೆಗೆ ಮಾರ್ಗವಲ್ಲ. ದೇಶವನ್ನು ಜಾತಿಯ ಹಾದಿಯಲ್ಲಿ ವಿಭಜಿಸುವ ಮಹತ್ವಾಕಾಂಕ್ಷೆ ಮತ್ತು ಧರ್ಮವನ್ನು ಹೊಂದಿರುವ ಬಿಜೆಪಿ ಹಾದಿಯಲ್ಲಿ ನಿಸ್ವಾರ್ಥ ಬದ್ಧತೆ ಮತ್ತು ಊಹಿಸಲಾಗದ ತ್ಯಾಗಗಳ ಮೂಲಕ ಬಂಡೆಯಂತೆ ನಿಲ್ಲಲು ಅವಕಾಶ ಮಾಡಿಕೊಟ್ಟಿರುವ ಕುಟುಂಬವನ್ನು ದುರ್ಬಲಗೊಳಿಸುವುದು ತಪ್ಪು. ಗಾಂಧಿ ಕುಟುಂಬದ ಕಾಂಗ್ರೆಸ್ ನಾಯಕತ್ವಕ್ಕೆ ಯಾವುದೇ ಸವಾಲನ್ನು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.
ಅಂತೆಯೇ ಛತ್ತೀಸ್ಗಡ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಕೂಡ ಗಾಂಧಿ ಕುಟುಂಬದ ಬೆಂಬಲಕ್ಕೆ ನಿಂತಿದ್ದು, ‘ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರತಿ ಸವಾಲಿನಲ್ಲೂ ನಮಗೆ ಭರವಸೆಯ ಕಿರಣ. ನಾವೆಲ್ಲರೂ ನಿಮ್ಮೊಂದಿಗಿದ್ದೇವೆ. ಕೋಟಿಗಟ್ಟಲೆ ಕಾರ್ಮಿಕರು ಮತ್ತು ಛತ್ತೀಸ್ಗಡ ಮತ್ತು ದೇಶದ ದೇಶವಾಸಿಗಳು ನಿಮ್ಮೊಂದಿಗಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಕೂಡ ಈ ಕುರಿತು ಮಾತನಾಡಿದ್ದು, ಕರ್ನಾಟಕ ಕಾಂಗ್ರೆಸ್ ಘಟಕ ಗಾಂಧಿ ಕುಟುಂಬದ ನಾಯಕತ್ವಕ್ಕೆ ಬೆಂಬಲ ನೀಡುತ್ತದೆ. ಬಿಕ್ಕಿಟ್ಟಿನ ಸಂದರ್ಭದಲ್ಲೂ ಸೋನಿಯಾ ಅವರು ಯಾವುದೇ ರೀತಿಯ ದೃತಿಗೆಡದೆ ಪಕ್ಷವನ್ನು ಯಶಸ್ವಿಯಾಗಿ ಸಂಘಟಿಸಿದ್ದರು. ವಿಷಯ ಯಾವುದೇ ಇರಲಿ ಅದನ್ನು ಪಕ್ಷದೊಳಗೆ ಚರ್ಚಿಸಬೇಕೇ ಹೊರತು ಮಾಧ್ಯಮಗಳ ಮೂಲಕ ಅಲ್ಲ ಎಂದು ಹೇಳಿದ್ದಾರೆ.
Follow us on Social media