ನವದೆಹಲಿ : ವಿಶ್ವದಾದ್ಯಂತ ಕರೋನವೈರಸ್ ಏಕಾಏಕಿ ಉಲ್ಪಣಿಸುತ್ತಿರುವ ಹಿನ್ನೆಲೆಯಲ್ಲಿ ಭಾರತ-ಐರೋಪ್ಯ ಒಕ್ಕೂಟ ಶೃಂಗಸಭೆ ಮುಂದೂಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಬೆಲ್ಜಿಯಂ ರಾಜಧಾನಿ ಬ್ರಸೆಲ್ಸ್ ಭೇಟಿ ರದ್ದಾಗಿದೆ ಎಂದು ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ.
‘ಭಾರತ-ಐರೋಪ್ಯ ಒಕ್ಕೂಟ ಶೃಂಗಸಭೆಗೆ ಪ್ರಧಾನಿ ಮೋದಿ ಹಾಜರಾಗಬೇಕಾಗಿತ್ತು. ಆದರೆ, ಸದ್ಯ ಪ್ರಯಾಣ ಬೆಳೆಸದಂತೆ ಎರಡೂ ದೇಶಗಳ ಆರೋಗ್ಯ ಅಧಿಕಾರಿಗಳು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೃಂಗಸಭೆಯನ್ನು ಪರಸ್ಪರ ಅನುಕೂಲಕರ ದಿನಾಂಕದಂದು ಮರು ನಿಗದಿಪಡಿಸಲು ನಿರ್ಧರಿಸಲಾಗಿದೆ ಎಂಬುದಾಗಿ ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
‘ಐರೋಪ್ಯ ಒಕ್ಕೂಟ ಮತ್ತು ಭಾರತದ ನಡುವಿನ ನಿಕಟ ಸಹಕಾರದ ಸ್ಫೂರ್ತಿಯೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಭಾರತ ಮತ್ತು ಐರೋಪ್ಯ ದೇಶಗಳು ಜಾಗತಿಕ ಆರೋಗ್ಯದ ಬಗ್ಗೆ ಸಮಾಣ ಕಾಳಜಿ ಮತ್ತು ಬದ್ಧತೆಯನ್ನು ಹಂಚಿಕೊಳ್ಳುತ್ತವೆ. ಮತ್ತು ಸೋಂಕು ಶೀಘ್ರವೇ ನಿಯಂತ್ರಣಕ್ಕೆ ಬರಲೆಂದು ಆಶಿಸುತ್ತವೆ ಎಂದು ಅವರು ಹೇಳಿದ್ದಾರೆ.
ಐರೋಪ್ಯ ಆಯೋಗ, ಐರೋಪ್ಯ ಮಂಡಳಿ ಮತ್ತು ಐರೋಪ್ಯ ಸಂಸತ್ ಸೇರಿದಂತೆ ಅದರ ಅನೇಕ ಸಂಸ್ಥೆಗಳಿಗೆ ಬ್ರಸೆಲ್ಸ್ ನೆಲೆಯಾಗಿದೆ.
ಐರೋಪ್ಯ ಸಂಸತ್ತು ಈಗಾಗಲೇ ಬ್ರಸೆಲ್ಸ್ ಮತ್ತು ಸ್ಟ್ರಾಸ್‌ಬರ್ಗ್‌ನಲ್ಲಿನ ತನ್ನ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮಾರಣಾಂತಿಕ ವೈರಸ್ ಇದುರವರೆಗೆ ವಿಶ್ವದಾದ್ಯಂತ ಸುಮಾರು 3,200 ಜನರನ್ನು ಬಲಿ ತೆಗೆದುಕೊಂಡಿದೆ. ಚೀನಾದ ವುಹಾನ್‌ನಲ್ಲಿ ಮೊದಲು ಉಲ್ಬಣಗೊಂಡ ನಂತರ ವಿಶ್ವದಾದ್ಯಂತ 90,000 ಕ್ಕೂ ಹೆಚ್ಚು ಜನರು ಸೋಂಕಿಗೆ ತುತ್ತಾಗಿದ್ದಾರೆ.
Source : UNI
Follow us on Social media