ಬೆಂಗಳೂರು: ಇನ್ಮುಂದೆ ಅನುಮತಿ ಇಲ್ಲದೆ ಕೊರೊನಾ ಸೋಂಕಿತ ರೋಗಿಗಳ ಛಾಯಾಚಿತ್ರ ಸೆರೆಹಿಡಿಯದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸ್ಥಳೀಯರು ತಮ್ಮ ಮೊಬೈಲ್ಗಳಲ್ಲಿ ಛಾಯಾಚಿತ್ರ ಸೆರೆಹಿಡಿಯುವುದು ಹೆಚ್ಚಾಗುತ್ತಿದ್ದು, ಅದು ಮಾಧ್ಯಮಗಳಲ್ಲೂ ಬಿತ್ತರವಾಗುತ್ತಿದೆ. ಹೀಗಾಗಿ ಈ ಕುರಿತು ಅನೇಕ ಜನ ದೂರು ನೀಡುತ್ತಿದ್ದಾರೆ. ಈ ರೀತಿ ಫೋಟೋ/ವಿಡಿಯೋ ಸೆರೆಹಿಡಿಯುವುದರಿಂದ ನಮ್ಮ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ಹಾಗೂ ಮುಜುಗರ ಉಂಟಾಗುತ್ತದೆ ಎಂದು ಅವರು ದೂರುತ್ತಿದ್ದಾರೆ.
ಹೀಗಾಗಿ ಯಾರೂ ಅನುಮತಿ ಇಲ್ಲದೇ ಕೊರೊನಾ ರೋಗಿಗಳ ಛಾಯಾಚಿತ್ರ ಸೆರೆಹಿಡಿಯುವಂತಿಲ್ಲ. ಈ ನಿಯಮ ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
Follow us on Social media