ಚೆನ್ನೈ: ತಮಿಳುನಾಡಿನ ಡಿಎಂಕೆ ಹಿರಿಯ ಶಾಸಕ ಜೆ.ಅನ್ಬಳಗನ್ ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
62 ವರ್ಷದ ಡಿಎಂಕೆ ಶಾಸಕ ಜೆ.ಅನ್ಬಳಗನ್ ಅವರನ್ನು ಜೂನ್ 2 ರಂದು ಡಾ. ರೇಲಾ ಇನ್ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೆಂಟರ್‌ಗೆ ದಾಖಲಿಸಲಾಗಿತ್ತು. ಮಂಗಳವಾರ ರಾತ್ರಿ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿತ್ತು. ಹೀಗಾಗಿ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ವೈದ್ಯರು ತಿಳಿಸಿದರು.
ಅನ್ಬಳಗನ್ ಆಸ್ಪತ್ರೆಗೆ ದಾಖಲಾಗಿದ್ದಾಗಲೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆಮ್ಲಜನಕದ ಪ್ರಮಾಣ ಅರ್ಧಕ್ಕೆ ಕುಸಿದಿತ್ತು. ನಂತರವೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡು ಬಂದಿರಲಿಲ್ಲ. ಕೊರೊನಾ ಸೋಂಕಿನ ಜೊತೆಗೆ ಅವರಿಗೆ ರಕ್ತದೊತ್ತಡ, ಕಿಡ್ನಿ ಸಮಸ್ಯೆ ಕೂಡ ಇದ್ದಿತ್ತು. ಹೀಗಾಗಿ ಕೊರೊನಾ ಸೋಂಕಿನಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಅನ್ಬಳಗನ್ ಅವರಿಗೆ ಉಸಿರಾಟದ ಸಮಸ್ಯೆ ಉಂಟಾಗಿದೆ. ತಕ್ಷಣ ಡಾ. ರೇಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಕೋವಿಡ್-19 ಪರೀಕ್ಷೆಯನ್ನು ನಡೆಸಲಾಗಿತ್ತು. ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ಚಿಕಿತ್ಸೆ ಫಲಕಾರಿಯಾಗದೆ ಅನ್ಬಳಗನ್ ಮೃತಪಟ್ಟಿದ್ದಾರೆ.
Follow us on Social media