ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ರಷ್ಯಾ ದೇಶವನ್ನು ಹಿಂದಿಕ್ಕಿ, ವಿಶ್ವದಲ್ಲಿ ಮೂರನೇ ಸ್ಥಾನಕ್ಕೇರಿದೆ.
ಆರೋಗ್ಯ ಸಚಿವಾಲಯದ ಅಧಿಕೃತ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ 6 ಲಕ್ಷದ 83 ಸಾವಿರದ 240ಕ್ಕೆ ಏರಿಕೆಯಾಗಿದ್ದು, ರಷ್ಯಾಗಿಂತಲೂ 1989 ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ವರದಿಯಾಗಿದೆ.
ಜಾಗತಿಕ ಮಟ್ಟದಲ್ಲಿ ಅಮೆರಿಕಾದಲ್ಲಿ ಈವರೆಗೂ 27.8 ಲಕ್ಷ ಪ್ರಕರಣಗಳು ದಾಖಲಾಗಿದ್ದು, ಮೊದಲ ಸ್ಥಾನದಲ್ಲಿದೆ. ಭ್ರಜಿಲ್ ನಲ್ಲಿ 15 ಲಕ್ಷ ಪ್ರಕರಣಗಳು ವರದಿಯಾಗಿದ್ದು, ದ್ವಿತೀಯ ಸ್ಥಾನದಲ್ಲಿದೆ.
ಪ್ರಸ್ತುತ ದೇಶದಲ್ಲಿ 2 ಲಕ್ಷದ 47 ಸಾವಿರದ 788 ಸಕ್ರಿಯ ಪ್ರಕರಣಗಳಿದ್ದು, 19,441 ಜನ ಮೃತಪಟ್ಟಿದ್ದಾರೆ. ಈವರೆಗೂ 4 ಲಕ್ಷದ 16 ಸಾವಿರದ 011 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
Follow us on Social media