ನವದೆಹಲಿ : ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಮತ್ತೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶದ ವಿವಿಧ ರಾಜ್ಯಗಳಿಂದ ಒಟ್ಟಾರೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ. ಅಂತೆಯೇ ಕಳೆದ 24 ಗಂಟೆಗಳಲ್ಲಿ 122 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 2,415ಕ್ಕೆ ಏರಿಕೆಯಾಗಿದೆ.
24,453 ಮಂದಿ ಗುಣಮುಖ
ಇನ್ನು ದೇಶದಲ್ಲಿ ಈ ವರೆಗೂ 24,453 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ 47480 ಮಂದಿ ಸೋಂಕಿತರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.