ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ಒಂದೇ ದಿನ 18 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿದೆ.
ಇಂದು ಬೆಳಗ್ಗೆ ಐದು ಕೊವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸಂಜೆ ಮತ್ತೆ 13 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿದೆ. ಈ ಪೈಕಿ 16 ಮಂದಿ ಮೃತಪಟ್ಟಿದ್ದು, 112 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ವಿಜಯಪುರದಲ್ಲಿ 11, ಕಲಬುರಗಿಯಲ್ಲಿ 5, ಗದಗ ಮತ್ತು ಬೀದರ್ ನಲ್ಲಿ ತಲಾ 1 ಕೊವಿಡ್-19 ಪಾಸಿಟಿವ್ ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.
ಕಲಬುರಗಿಯಲ್ಲಿ ಐದು ಹೊಸ ಪ್ರಕರಣ ಬೆಳಕಿಗೆ ಬಂದಿದೆ. ರೋಗಿ ಸಂಖ್ಯೆ 175 ಅವರ ಸಂಪರ್ಕದಲ್ಲಿದ್ದ 17ವರ್ಷದ (ರೋಗಿ ಸಂಖ್ಯೆ-391) ಕಲಬುರಗಿಯ ಯುವಕನಲ್ಲಿ ಸೋಂಕು ದೃಢಪಟ್ಟಿದೆ.
ರೋಗಿ ಸಂಖ್ಯೆ 205 ರ ಸಂಪರ್ಕದಲ್ಲಿದ್ದ 13ವರ್ಷದ (ರೋಗಿ ಸಂಖ್ಯೆ-392) ಬಾಲಕ, 30 ವರ್ಷದ ಮಹಿಳೆ ಸೇರಿ 19ವರ್ಷದ ಯುವಕನಿಗೆ ಸೋಂಕು ತಗುಲಿದೆ.
ಇನ್ನು, ರೋಗಿ ಸಂಖ್ಯೆ 177ರ ಸಂಪರ್ಕದಲ್ಲಿದ್ದ 50 ವರ್ಷದ ಪುರುಷನಿಗೆ (394) ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಸೋಂಕಿತ ಐವರನ್ನು ಕಲಬುರಗಿ ನಗರದ ಇಎಸ್ ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಈಗಾಗಲೇ ಮೂವರು ಮೃತಪಟ್ಟಿದ್ದು, ಮೂವರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಇನ್ನು, ಗದಗ ಜಿಲ್ಲೆಯಲ್ಲಿ 24 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದ್ದು. ಈತ ರೋಗಿ ಸಂಖ್ಯೆ 370 ಅವರ ದ್ವಿತೀಯ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದ್ದು, ಸದ್ಯ ಈತನನ್ನು ಗದಗನ ನಿಗಧಿತ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ. ಅಲ್ಲದೇ, ವಿಜಯಪುರಲ್ಲಿಂದು 11ಹೊಸ ಪ್ರಕರಣಗಳು ವರದಿ ಆಗಿವೆ. ರೋಗಿ ಸಂಖ್ಯೆ 221 ರ ಸಂಪರ್ಕದಲ್ಲಿದ್ದ 7 ವರ್ಷದ ಬಾಲಕಿ, 36 ವರ್ಷದ ಪುರುಷ ಹಾಗೂ 27, 25 ವರ್ಷದ ಯುವತಿ ಸೇರಿ 10 ವರ್ಷದ ಬಾಲಕಿ, 14 ವರ್ಷದ ಬಾಲಕನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ರೋಗಿ ಸಂಖ್ಯೆ 362 ಅವರ ಸಂಪರ್ಕದಲ್ಲಿದ್ದ 21 ವರ್ಷದ ಯುವತಿ, 28 ವರ್ಷದ ಯುವಕ, 47 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು, ನಿಗದಿತ ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದೆ.
ಬೀದರ ಜಿಲ್ಲೆಯಲ್ಲೊಂದು ಹೊಸ ಪ್ರಕರಣ ವರದಿ ಆಗಿದ್ದು, ರೋಗಿ ಸಂಖ್ಯೆ 117 ಅವರ ಸಂಪರ್ಕದಲ್ಲಿದ್ದ 27 ವರ್ಷದ ಯುವಕನಿಗೆ ಸೋಂಕು ತಗುಲಿದೆ. ಸದ್ಯ ಈತನನ್ನು ಬೀದರ್ ಜಿಲ್ಲೆಯ ನಿಗದಿತ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಇಲ್ಲಿಯವರೆಗೆ ರಾಜ್ಯದಲ್ಲಿ 16 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, 112 ಜನ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಕಲಬುರಗಿಯಲ್ಲಿ ಸೋಂಕಿತರ ಸಂಖ್ಯೆ 27 ಕ್ಕೆ ಏರಿಕೆ
ಸೂರ್ಯ ನಗರಿ ಕಲಬುರಗಿ ಜಿಲ್ಲೆಯಲ್ಲೇ ಇಂದು ಐದು ಹೊಸ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದ್ದು, ಇದೀಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 27 ಕ್ಕೆ ಏರಿಕೆ ಆಗಿದೆ. ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ಸೋಂಕಿಗೆ ಕಲಬುರಗಿ ವೃದ್ಧ ಬಲಿಯಾಗಿದ್ದು, ಇದೀಗ ಜಿಲ್ಲೆಯಲ್ಲಿ ಮತ್ತೆ ಹೊಸ ಐದು ಪ್ರಕರಣಗಳು ಕಲಬುರಗಿಯಲ್ಲೇ ವರದಿ ಆಗಿರುವುದರಿಂದ ಮತ್ತಷ್ಟು ಆತಂಕ ಹೆಚ್ಚಿಸಿದೆ. ಸದ್ಯ ಸೋಂಕಿತ ಐವರನ್ನು ಕಲಬುರಗಿ ನಗರದ ಇಎಸ್ ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಈಗಾಗಲೇ ಮೂವರು ಮೃತಪಟ್ಟಿದ್ದು, ಮೂವರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
