ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳ ಸಂಖ್ಯೆ 5 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಯುವ ಯಾವುದೇ ಯೋಜನೆ ಕೇಂದ್ರ ಸರ್ಕಾರಕ್ಕೆ ಇಲ್ಲ, ಪ್ರಧಾನಿ ನರೇಂದ್ರ ಮೋದಿ ಕೊರೋನಾ ವಿರುದ್ಧ ಹೋರಾಟವನ್ನು ನಿರಾಕರಿಸಿ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ದೇಶದ ಹೊಸ ಭಾಗಗಳಿಗೂ ಕೋವಿಡ್-19 ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ನಿಯಂತ್ರಿಸುವ ಯೋಜನೆ ಕೇಂದ್ರಸರ್ಕಾರಕ್ಕೆ ಇಲ್ಲ.ಪ್ರಧಾನಿ ಮೋದಿ ಮೌನವಾಗಿದ್ದಾರೆ.ಅದರ ವಿರುದ್ಧ ಹೋರಾಟವನ್ನು ನಿರಾಕರಿಸಿ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Follow us on Social media