ನವದೆಹಲಿ: ದೇಶದಾದ್ಯಂತ ಮಹಾಮಾರಿ ಕೊರೋನಾ ರುದ್ರತಾಂಡವವಾಡುತ್ತಿದ್ದು, ಸಾವಿನ ಸಂಖ್ಯೆ 339ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸೋಂಕಿತರ ಸಂಖ್ಯೆ 10,363ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೊಸದಾಗಿ 1,211 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 31 ಮಂದಿ ಸಾವನ್ನಪ್ಪಿದ್ದಾರೆ.
10,363 ಮಂದಿಯ ಪೈಕಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 1,036 ಮಂದಿ ವೈರಸ್ ನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಇನ್ನು ಮಹಾರಾಷ್ಟ್ರ ರಾಜ್ಯ ಇಡೀ ದೇಶದಲ್ಲಿಯೇ ಹೆಚ್ಚು ವೈರಸ್ ಪೀಡಿತ ರಾಜ್ಯವಾಗಿ ಹೊರಹೊಮ್ಮುತ್ತಿದ್ದು, ಈ ವರೆಗೂ ಆ ರಾಜ್ಯದಲ್ಲಿ 2,334 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ದೆಹಲಿಯಲ್ಲಿ 1,510, ತಮಿಳುನಾಡು ರಾಜ್ಯದಲ್ಲಿ 1,173 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
Follow us on Social media